ಬೆಂಗಳೂರು : ಲೋಕಸಭಾ ಚುನಾವಣೆಯ ಹಿನ್ನಲೆಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಇಂದು ಬೆಂಗಳೂರಿಗೆ ಆಗಮಿಸಲಿದ್ದಾರೆ. ಅಮಿತ್ ಶಾ ಆಂಧ್ರ ಪ್ರದೇಶ, ಕರ್ನಾಟಕ ಹಾಗು ತಮಿಳುನಾಡಿಗೆ ಎರಡು ದಿನಗಳ ಪ್ರವಾಸ ಕೈಗೊಂಡಿದ್ದು, ಇಂದು ಬೆಂಗಳೂರಿಗೆ ಬರುತ್ತಿದ್ದಾರೆ. ಇಂದು ಮಧ್ಯಾಹ್ನ 3 ಗಂಟೆಗೆ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದು, ಮಧ್ಯಾಹ್ನ 3.40ಕ್ಕೆ ದೇವನಹಳ್ಳಿಯ ಅವತಿಯ ಸಾಯಿ ಗಾರ್ಡನ್ ನಲ್ಲಿರುವ ಶಕ್ತಿಕೇಂದ್ರದ ಸಮಾವೇಶದಲ್ಲಿ ಭಾಗವಹಿಸಿ, ಸಂಜೆ 5.45ಕ್ಕೆ ಯಲಹಂಕದಲ್ಲಿರುವ