Normal 0 false false false EN-US X-NONE X-NONE ಬೆಂಗಳೂರು : ಇಂದು ಸಿಎಂ ಯಡಿಯೂರಪ್ಪ ನೇತೃತ್ವದಲ್ಲಿ ಬಿಜೆಪಿ ಕೋರ್ ಕಮಿಟಿ ಸಭೆ ನಡೆಯಲಿದೆ. ಇಂದು ಸಂಜೆ 5ಕ್ಕೆ ಬಿಜೆಪಿ ಕೋರ್ ಕಮಿಟಿ ಸಭೆ ನಡೆಯಲಿದ್ದು,ಈ ವೇಳೆ ರಾಜ್ಯ ಸಭಾ ಅಭ್ಯರ್ಥಿ ಆಯ್ಕೆ ಬಗ್ಗೆ ಚರ್ಚೆ ನಡೆಸಲಾಗುವುದು ಎನ್ನಲಾಗಿದೆ. ಈ ಸಭೆಯಲ್ಲಿ ಸಿಎಂ ಬಿಎಸ್ ಯಡಿಯೂರಪ್ಪ, ನಳಿನ್ ಕುಮಾರ್ ಕಟೀಲು, ಅರುಣ್ ಕುಮಾರ್ ಸೇರಿದಂತೆ ಹಲವು ನಾಯಕರು ಭಾಗಿಯಾಗಲಿದ್ದಾರೆ.