ಬೆಂಗಳೂರು: ವೈಚಾರಿಕ ವಿಚಾರಗಳು ಯಾವುವೇ ಆದರೂ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ವಿಚಾರ ಅತ್ಯಂತ ಖಂಡನೀಯ. ಈ ಸಾವಿನಲ್ಲಿ ರಾಜಕಾರಣ ಸರಿಯಲ್ಲ ಎಂದು ಮಾಜಿ ಡಿಸಿಎಂ ಆರ್.ಅಶೋಕ್ ಹೇಳಿದ್ದಾರೆ. ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರ ಹತ್ಯೆ ಪ್ರಕರಣವನ್ನು ಎಸ್ಐಟಿ ತನಿಖೆಗೆ ನೀಡಿದೆ. ಇದು ಸಿಐಡಿಯ ಒಂದು ಭಾಗ. ಹೀಗಾಗಿ ಸತ್ಯ ಹೊರಬರುವುದಿಲ್ಲ. ಹೀಗಾಗಿ ಪ್ರಕರಣವನ್ನ ಸಿಬಿಐಗೆ ವಹಿಸಬೇಕು ಎಂದು ಸರ್ಕಾರಕ್ಕೆ ಆಗ್ರಹಿಸಿದರು. ಈ ಘಟನೆಯಲ್ಲಿ ಯಾರ