ಯಾದಗಿರಿ ಜಿಲ್ಲೆಯಲ್ಲಿ ಒಂದು ಕಡೆ ಚುನಾವಣೆ ಕಾವು ಏರುತ್ತಿದ್ದರೆ ಇನ್ನೊಂದು ಕಡೆ ರಾಜಕೀಯ ದುರುದ್ದೇಶದಿಂದ ಬಿಜೆಪಿ ಜಿಲ್ಲಾಧ್ಯಕ್ಷನ ಪತ್ನಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ಬಿಜೆಪಿ ಕಾರ್ಯಕರ್ತರು ನೀತಿ ಸಂಹಿತೆ ಲೆಕ್ಕಿಸದೆ ಬಿಜೆಪಿಯ ಜಿಲ್ಲಾಧ್ಯಕ್ಷ ಚಂದ್ರಶೇಖರ ಮಾಗನೂರ ಅವರ ಪತ್ನಿ ಶಿಲ್ಪಾ ಮೇಲಾದ ಹಲ್ಲೆಯನ್ನು ಖಂಡಿಸಿ ಇಂದು ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟಿಸಿದರು. ಬಿಜೆಪಿಯ ಜಿಲ್ಲಾಧ್ಯಕ್ಷ ಚಂದ್ರಶೇಖರ ಮಾಗನೂರ ಪತ್ನಿ ಶಿಲ್ಪಾ ಮಾಗನೂರ ಮೇಲೆ ದುಷ್ಕರ್ಮಿಗಳು ಮಾರಣಾಂತಿಕವಾಗಿ ಹಲ್ಲೆ