ಬಿಜೆಪಿ ಪಕ್ಷ ಒಡೆದ ಮನೆಯಾಗಿದ್ದು, ರಾಜ್ಯದಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಲು ಸಾಧ್ಯವಿಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಎಸ್.ಆರ್.ಪಾಟೀಲ್ ಭವಿಷ್ಯ ನುಡಿದ್ದಾರೆ. ರಾಯಚೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಬಿಜೆಪಿ ಒಡೆದ ಮನೆಯಾಗಿದ್ದರೆ, ಜೆಡಿಎಸ್ ದುರ್ಬಲ ಪಕ್ಷವಾಗಿದೆ. ಇದರಿಂದ ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವೇ ಅಧಿಕಾರಕ್ಕೆ ಬರಲಿದೆ ಎಂದು ತಿಳಿಸಿದ್ದಾರೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ವಿದೇಶಗಳಲ್ಲಿನ ಕಪ್ಪು ಹಣವನ್ನು ತಂದು ಜನರಿಗೆ ಹಂಚುವುದಾಗಿ ಸುಳ್ಳು ಹೇಳಿ ಅಧಿಕಾರಕ್ಕೆ