ಆರೆಸ್ಸೆಸ್ ಕಾರ್ಯಕರ್ತ ರುದ್ರೇಶ್ ಕೊಲೆ ಪ್ರಕರಣದಲ್ಲಿ ಬಿಜೆಪಿಯವರೂ ರಾಜಕೀಯ ಮಾಡಬಾರದು ಎಂದು ಜಿಡಿಎಸ್ ಉಚ್ಛಾಟಿತ ಶಾಸಕ ಜಮೀರ್ ಅಹ್ಮದ್ ಹೇಳಿದರು. ನಗರದ ವಿಕ್ಟೋರಿಯಾ ಆಸ್ಪತ್ರೆಗೆ ಭೇಟಿ ನೀಡಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆರೆಸ್ಸೆಸ್ ಕಾರ್ಯಕರ್ತ ರುದ್ರೇಶ್ ಸಾವು ಸಾಕಷ್ಟು ನೋವು ತಂದಿದೆ. ಹಣಕಾಸಿನ ವಿಚಾರಕ್ಕೆ ಸಂಬಂಧಿಸಿದಂತೆ ಆರೆಸ್ಸೆಸ್ ಕಾರ್ಯಕರ್ತ ರುದ್ರೇಶ್ ಕೊಲೆಯಾಗಿದೆ ಎಂದು ಮಾಹಿತಿ ಲಭ್ಯವಾಗಿದೆ. ಸಾವಿನಲ್ಲೂ ಬಿಜೆಪಿಯವರೂ ರಾಜಕೀಯ ಮಾಡಬಾರದು ಎಂದು ಕೇಳಿಕೊಂಡರು. ಆರ್ಎಸ್ಎಸ್