ಬಿಜೆಪಿ ಅಧಿಕಾರದಲ್ಲಿದ್ದಾಗ ಪ್ರಭಾವಿ ಮುಖಂಡರಾಗಿದ್ದ ಮಾಜಿ ಸಚಿವ ಆನಂದ್ ಅಸ್ನೋಟಿಕರ್, ಬಿಜೆಪಿಯನ್ನು ತೊರೆದು ಜೆಡಿಎಸ್ ಪಾಳಯದತ್ತ ತಮ್ಮ ಚಿತ್ತ ಹರಿಸಿದ್ದಾರೆ ಎಂದು ಹೇಳಲಾಗುತ್ತಿದೆ. ಕಳೆದ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿದ್ದ ಸತೀಶ್ ಸೈಲ್ ಎದುರು ಸೋಲನುಭವಿಸಿದ್ದ ಅಸ್ನೋಟಿಕರ್, ಮತ್ತೆ ತಮ್ಮ ರಾಜಕೀಯ ಭವಿಷ್ಯಕ್ಕಾಗಿ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ ಎಂದು ಉಹಾಪೋಹಗಳು ಹರಡಿವೆ. ಮುಂಬರುವ ವಿಧಾನಸಭೆಗೆ ಕೆಲವೇ ತಿಂಗಳುಗಳು ಬಾಕಿ ಉಳಿದಿರುವಂತೆ ಮುಂದೆ ಜೆಡಿಎಸ್ ಪಕ್ಷ ಸರಕಾರ ರಚಿಸುವ ಸಾಧ್ಯತೆಗಳಿವೆ ಎನ್ನುವ