ಬೆಂಗಳೂರು : ಕರ್ನಾಟಕ ವಿಧಾನಸಭೆ ಚುನಾವಣೆಗೆ ಅಧಿಸೂಚನೆ ಹೊರಬೀಳಲು ಮೂರು ದಿನಗಳು ಬಾಕಿ ಉಳಿದಿದೆ. ಆದರೂ ಆಡಳಿತಾರೂಢ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನೇ ಬಿಡುಗಡೆ ಮಾಡಿಲ್ಲ. ಕಳೆದ ಎರಡು ದಿನಗಳಿಂದಲೂ ದೆಹಲಿಯಲ್ಲಿ ಸಾಲು ಸಾಲು ಸಭೆ ನಡೆದಿದ್ದರೂ, ಮೊದಲ ಪಟ್ಟಿ ಬಿಡುಗಡೆ ಕಗ್ಗಂಟಾಗಿಯೇ ಉಳಿದಿದೆ. ಭಾನುವಾರ 170-180 ಅಭ್ಯರ್ಥಿಗಳ ಪಟ್ಟಿ ರೆಡಿಯಾಗಿದೆ, ರಿಲೀಸ್ ಆಗೋದಷ್ಟೇ ಬಾಕಿಯಿದೆ ಎನ್ನಲಾಗಿತ್ತು. ಆದ್ರೆ, ರಾತ್ರಿ ಕಳೆದು ಬೆಳಗಾಗುವಷ್ಟರಲ್ಲಿ ನಿರ್ಧಾರ ಬದಲಿಸಿದೆ. ಸೋಮವಾರ ಬೆಳ್ಳಂಬೆಳಗ್ಗೆ