ಕಳೆದ ಮೂರು ನಾಲ್ಕು ದಿನಗಳ ಬೆಳವಣಿಗೆ ಗಮನಿಸಿದರೆ ಬಿಜೆಪಿಗೆ ಸಂಪೂರ್ಣ ಬಹುಮತ ದೊರೆಯಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.ಅವರು ಇಂದು ಮಾಧ್ಯಮದವರೊಂದಿಗೆ ಮಾತನಾಡಿ, ಕೆಲವು ಕ್ಷೇತ್ರದಲ್ಲಿ ಆಶ್ಚರ್ಯಕರ ಫಲಿತಾಂಶ ಬರಲಿದೆ.ಕಾರ್ಯಕರ್ತರು ಮತ್ತು ನಾಯಕರಿಗೆ ಆತ್ಮವಿಶ್ವಾಸವಿದೆ ಎಂದರು.ಏ .8 ರಂದು ಪಟ್ಟಿ ಬಿಡುಗಡೆ ವಾಸ್ತವಾಂಶ ಆಧರಿಸಿ ಅಭ್ಯರ್ಥಿ ಆಯ್ಕೆಯಾಗಿದೆ. ಇಂದು ರಾಜ್ಯ ಸಮಿತಿಯ ಸಭೆ ಕರೆದಿದ್ದು, ಎರಡು ದಿನಗಳ ಕಾಲ ನಡೆಯಲಿದೆ. ಸಭೆ ಬಳಿಕ ಕೇಂದ್ರಕ್ಕೆ ಅಭ್ಯರ್ಥಿಗಳ ಪಟ್ಟಿ ಕಳುಹಿಸಲಾಗುವುದು.