ಶಾಲೆಯಲ್ಲಿ ರಾಷ್ಟ್ರಧ್ವಜ ಹಾರಾಟ ಮಾಡುವ ಕಂಬದಲ್ಲಿ ಬಿಜೆಪಿ ಪಕ್ಷದ ಬಾವುಟ ಹಾರಿಸಿರುವುದು ವಿವಾದಕ್ಕೆ ಕಾರಣವಾಗಿದೆ. ನಗರದ ಶಾಲೆಯೊಂದರಲ್ಲಿ ಆಯೋಜಿಸಲಾಗಿದ್ದ ಬಿಜೆಪಿ ಕಾರ್ಯಕ್ರಮದಲ್ಲಿ ವಿಧಾನಪರಿಷತ್ ವಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಭಾಗಿಯಾಗಿದ್ದರು. ಶಾಲೆಯಲ್ಲಿ ರಾಷ್ಟ್ರಧ್ವಜ ಹಾರಿಸುವ ಕಂಬದಲ್ಲಿ ಬಿಜೆಪಿ ಪಕ್ಷದ ಬಾವುಟ ಹಾರಿಸಿರುವುದು ಕಂಡು ಬಂದಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ. ಘಟನೆಯ ಬಗ್ಗೆ ಪ್ರತಿಕ್ರಿಯೆ ನೀಡಿದ ಮಾಜಿ ಸಚಿವ ಬೆಳ್ಳುಬ್ಬಿ, ಬಿಜೆಪಿ ಕಾರ್ಯಕ್ರಮ ದೇವಸ್ಥಾನದಲ್ಲಿ ಆಯೋಜಿಸಲಾಗಿತ್ತೇ ಹೊರತು ಶಾಲೆಯಲ್ಲಲ್ಲ.