ಬೆಂಗಳೂರು: ರಾಮನಗರ ಲೋಕಸಭೆ ಉಪಚುನಾವಣೆಗೆ ಮೊದಲು ಅಭ್ಯರ್ಥಿ ಎಲ್ ಚಂದ್ರಶೇಖರ್ ಬಿಜೆಪಿಗೆ ದೊಡ್ಡ ಶಾಕ್ ಕೊಟ್ಟಿದ್ದಾರೆ.ಇಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ಎಲ್ ಚಂದ್ರಶೇಖರ್ ಚುನಾವಣಾ ಕಣದಿಂದ ಹಿಂದೆ ಸರಿದಿದ್ದು, ಮತ್ತೆ ಕಾಂಗ್ರೆಸ್ ಪಕ್ಷ ಸೇರುತ್ತಿರುವುದಾಗಿ ಹೇಳಿದ್ದಾರೆ. ಬೆಂಗಳೂರಿನಲ್ಲಿ ಕಾಂಗ್ರೆಸ್ ಸಂಸದ ಡಿಕೆ ಸುರೇಶ್ ಜತೆ ಸುದ್ದಿಗೋಷ್ಠಿ ನಡೆಸಿದ ಚಂದ್ರಶೇಖರ್ ನನ್ನನ್ನು ಬಿಜೆಪಿ ನಾಯಕರು ಸರಿಯಾಗಿ ನಡೆಸಿಕೊಳ್ಳಲಿಲ್ಲ. ಅದಕ್ಕೇ ಚುನಾವಣಾ ಕಣದಿಂದ ಹಿಂದೆ ಸರಿಯುತ್ತಿದ್ದೇನೆ. ನಾನು ಗೆಲ್ಲಬೇಕು ಎಂದು ನಮ್ಮ ನಾಯಕರಿಗೇ