ಬೆಂಗಳೂರು : ಬಿಜೆಪಿ ಸರ್ಕಾರ ಜನವರಿ ಅಥವಾ ಫೆಬ್ರವರಿಯಲ್ಲಿ ಪತನಗೊಳ್ಳಲಿದ್ದು, ಚುನಾವಣೆಗೆ ಸಜ್ಜಾಗುವಂತೆ ಮಾಜಿ ಸಿಎಂ ಸಿದ್ದರಾಮಯ್ಯ ಕಾಂಗ್ರೆಸ್ ಶಾಸಕರಿಗೆ ಹೇಳಿದ್ದಾರೆ. ವಿಧಾನಸಭೆ ವಿರೋಧಪಕ್ಷದ ನಾಯಕರಾಗಿ ಆಯ್ಕೆಯಾದ ಬಳಿಕ ಕಾಂಗ್ರೆಸ್ ಶಾಸಕರೊಂದಿಗೆ ಸಭೆ ನಡೆಸಿದ ಸಿದ್ದರಾಮಯ್ಯ ಶಾಸಕರೊಂದಿಗೆ ಮಾತನಾಡುವ ವೇಳೆ ಈ ಹೊಸ ಬಾಂಬ್ ಸಿಡಿಸಿದ್ದಾರೆ. ಯಡಿಯೂರಪ್ಪನವರ ಸರ್ಕಾರ ಕಡೇ ಪಕ್ಷ ಒಂದು ವರ್ಷಗಳ ಕಾಲವಾದರೂ ಅಧಿಕಾರದಲ್ಲಿದ್ದರೆ ಸರ್ಕಾರದ ವೈಫಲ್ಯಗಳನ್ನು ಮುಂದಿಟ್ಟುಕೊಂಡು ಚುನಾವಣೆಗೆ ಹೋಗಬಹುದಿತ್ತು. ಆದರೆ ಈ ಸರ್ಕಾರ