Widgets Magazine

ಬಿಜೆಪಿ ಸರ್ಕಾರದ ಸಚಿವ ಸಂಪುಟ ವಿಸ್ತರಣೆಗೆ ಮುಹೂರ್ತ ಫಿಕ್ಸ್

ಬೆಂಗಳೂರು| pavithra| Last Modified ಶುಕ್ರವಾರ, 2 ಆಗಸ್ಟ್ 2019 (10:34 IST)
ಬೆಂಗಳೂರು : ಅವರ ನೇತೃತ್ವದ ಬಿಜೆಪಿ ಸರ್ಕಾರದ ಸಚಿವ ಸಂಪುಟ ವಿಸ್ತರಣೆಗೆ ಮುಹೂರ್ತ ಫಿಕ್ಸ್ ಆಗಿದೆ.ಬಿಎಸ್ ಯಡಿಯೂರಪ್ಪ ಅವರು ಸಿಎಂ ಆಗಿ ಒಂದು ವಾರ ಕಳೆದರೂ ಇನ್ನು ಸಚಿವ ಸಂಪುಟ ವಿಸ್ತರಣೆಯಾಗದ ಹಿನ್ನಲೆಯಲ್ಲಿ ಇದೀಗ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರು ಬಿಎಸ್ ಯಡಿಯೂರಪ್ಪ ಅವರಿಗೆ ಕರೆ ಮಾಡಿ, ಆಗಸ್ಟ್ 9ರಂದು ಸಚಿವ ಸಂಪುಟ ರಚನೆಗೆ ಗ್ರೀನ್ ಸಿಗ್ನಲ್ ನೀಡಿದ್ದಾರೆ ಎನ್ನಲಾಗಿದೆ.


ಹಾಗೇ ಅಮಿತ್ ಶಾ ಅವರು ಆಗಸ್ಟ್ 7ರಂದು ಸಿಎಂ ಯಡಿಯೂರಪ್ಪ ಅವರಿಗೆ ದೆಹಲಿಗೆ ಬರುವಂತೆ ಸೂಚನೆ ನೀಡಿದ್ದು, ಯಾರಿಗೆ ಸಚಿವ ಸ್ಥಾನ ನೀಡಬೇಕು ಎನ್ನುವ ಕುರಿತು ಅವರು ಸಿಎಂ ಯಡಿಯೂರಪ್ಪ ಅವರಿಗೆ ಮಾಹಿತಿ ನೀಡಲಿದ್ದಾರೆ ಎನ್ನಲಾಗಿದೆ.

ಇದರಲ್ಲಿ ಇನ್ನಷ್ಟು ಓದಿ :