ಕ್ಯಾಮೆರಾ ಕಂಡರೆ ಬಿಜೆಪಿಗರಿಗೆ ಏಕೆ ನಡುಕ? ಹೀಗೊಂದು ಪ್ರಶ್ನೆ ಬಲವಾಗಿ ಕೇಳಿಬರಲಾರಂಭಿಸಿದೆ.ವಿಧಾನಸಭೆ ಕಲಾಪದಲ್ಲಿ ಖಾಸಗಿ ಮಾಧ್ಯಮಗಳನ್ನು ನಿಷೇಧ ಮಾಡಿರೋದನ್ನು ಖಂಡಿಸಿ ಧಾರವಾಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಪ್ರತಿಭಟನೆ ನಡೆಸಲಾಯಿತು.ವಿಧಾನ ಸಭೆ ಕಲಾಪದಲ್ಲಿ ಖಾಸಗಿ ಮಾಧ್ಯಮಗಳ ಕ್ಯಾಮರಾಗಳನ್ನು ನಿಷೇಧ ಮಾಡಿರುವುದನ್ನು ಖಂಡಿಸಿ, ಧಾರವಾಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಪ್ರತಿಭಟನೆ ಮಾಡಿ ತಹಸೀಲ್ದಾರ್ ಮೂಲಕ ಸಭಾಧ್ಯಕ್ಷರಿಗೆ ಮನವಿ ಸಲ್ಲಿಸಿದರು.ಇದಕ್ಕೂ ಮುನ್ನ ಪತ್ರಕರ್ತರ ಭವನದಿಂದ ತಹಸೀಲ್ದಾರ್ ರ ಕಚೇರಿವರೆಗೆ ರ್ಯಾಲಿ ನಡೆಸಲಾಯಿತು.