ಬೆಂಗಳೂರಿನ ಮಲ್ಲೇಶ್ವರದಲ್ಲಿ ಬಿಜೆಪಿಗೆ ಉತ್ತಮ ವಾತಾವರಣ ಇದೆ. ಕಳೆದ ಬಾರಿಗಿಂತ ಈ ಬಾರಿ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಡಾ.ಸಿ.ಎನ್.ಅಶ್ವತ್ ನಾರಾಯಣ ಇನ್ನೂ ಹಚ್ಚಿನ ಅಂತರದಿಂದ ಗೆಲ್ಲುವ ವಿಶ್ವಾಸದಲ್ಲಿದ್ದಾರೆ.ಈ ಕುರಿತು ಮಾತನಾಡಿದ ಅವರು, ಈ ಕ್ಷೇತ್ರದಲ್ಲಿ ಬ್ರಾಹ್ಮಣರ ಸಂಖ್ಯೆ ಹೆಚ್ಚಿದೆ ಎಂದು ಕಾಂಗ್ರೆಸ್ನವರು ಬ್ರಾಹ್ಮಣ ಅಭ್ಯರ್ಥಿಯನ್ನೇ ಕಣಕ್ಕಿಳಿಸಿದ್ದಾರೆ. ಆದರೆ, ಮಲ್ಲೇಶ್ವರದ ಜನ ಜಾತಿ ಮೀರಿದವರು. ಎಂದೆಂದೂ ಬಿಜೆಪಿಯನ್ನೇ ಬೆಂಬಲಿಸುತ್ತಾರೆ. ರಾಹುಲ್ ಗಾಂಧಿ ಕೂಡಲಸಂಗಮ ಬಸವಕಲ್ಯಾಣಕ್ಕೆ ಹೋಗಿ ಬಂದ ಮಾತ್ರಕ್ಕೆ ಏನೂ ವ್ಯತ್ಯಾಸವಾಗುವುದಿಲ್ಲ.