ಕೈ ನಾಯಕರು ಈ ಬಾರಿಯ ಚುನಾವಣೆಯಲ್ಲಿ ರಾಜ್ಯದಲ್ಲಿ ಅತಿ ಹೆಚ್ಚು ಸ್ಥಾನವನ್ನು ಗೆಲ್ಲಲು ಎಲ್ಲಾ ಪ್ರಯತ್ನವನ್ನ ಮಾಡುತ್ತಿದ್ದಾರೆ. ಆಪರೇಷನ್ ಹಸ್ತ ಮಾಡುವ ಮೂಲಕ ಬಿಜೆಪಿ ಮತ್ತು ಜೆಡಿಎಸ್ ಗೆ ಟಕ್ಕರ್ ನೀಡಲು ಕಮಲ ದಳ ನಾಯಕರಿಗೆ ಗಾಳ ಹಾಕುವ ಕೆಲಸ ತೆರೆಮರೆಯಲ್ಲಿ ಮುಂದುವರಿಸಿದ್ದಾರೆ.ಮತ್ತೊಂದೆಡೆ ರಾಜ್ಯ ಬಿಜೆಪಿಯಿಂದ ಲೋಕಸಭೆ ಚುನಾವಣೆಗೆ ತಾಲೀಮು ನಡೆಸಿದ್ದು, ಪದಾಧಿಕಾರಿಗಳ ಮತ್ತು ಕಾರ್ಯಕಾರಿಣಿ ಸಭೆ ಕರೆದಿದೆ. ಸೆಪ್ಟೆಂಬರ್ 12 ರಂದು ಬಿಜೆಪಿ ರಾಜ್ಯ ಪದಾಧಿಕಾರಿಗಳ ಸಭೆ ನಡೆದರೆ,