ಮೋದಿಯವರು ರಾಜ್ಯಕ್ಕೆ ಬಂದು ಹೋಗಿದ್ದು ಜೆಡಿಎಸ್ ಗೆ ಲಾಭವಾಗಿದೆ. ಇದೇ ರೀತಿ ಇನ್ನೂ ಎರಡು ಸಲ ರಾಜ್ಯಕ್ಕೆ ಬಂದು ಹೋದರೆ ಜೆಡಿಎಸ್ ಗೆ ಒಳ್ಳೆಯದಾಗಲಿದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಹೇಳಿದ್ದಾರೆ. ಕಲಬುರಗಿಯಲ್ಲಿ ಮಾತನಾಡಿದ ಅವರು, ದೇವೇಗೌಡರನ್ನು ಕೆಂಪೇಗೌಡರ ಪ್ರತಿಮೆ ಉದ್ಘಾಟನೆಗೆ ಕರೆಯದೇ ಇದ್ದದ್ದು ಕನ್ನಡಿಗರಿಗೆ ಮಾಡಿದ ಅವಮಾನ. ಸಿದ್ದರಾಮಯ್ಯರನ್ನ ಸಹ ಕಾರ್ಯಕ್ರಮಕ್ಕೆ ಕರೆಯಬೇಕಿತ್ತು. ಪ್ರಧಾನಿ ನಾಡು ಕಟ್ಟಲು ರಾಜ್ಯಕ್ಕೆ ಬಂದಿಲ್ಲ, ಬಿಜೆಪಿ ಕಟ್ಟಲು ಬಂದಿದ್ದಾರೆ ಎಂದು ಲೇವಡಿ