ಬೆಂಗಳೂರು : ಹೆಚ್ಡಿ ಕುಮಾರಸ್ವಾಮಿ ಅವರಿಗೆ ನಾಯಕತ್ವ ನೀಡುವ ದಾರಿದ್ರ್ಯ ಬಿಜೆಪಿಗಿಲ್ಲ ಎಂದು ಮಾಜಿ ಸಚಿವ ಸುನೀಲ್ ಕುಮಾರ್ ಹೇಳಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಜೆಡಿಎಸ್ ಜತೆ ಮೈತ್ರಿಯ ಅನಿವಾರ್ಯತೆ ಬಿಜೆಪಿಗಿಲ್ಲ, ಲೋಕಸಭೆಯಲ್ಲಿ ಕಳೆದ ಸಲದಷ್ಟೇ ಸೀಟು ಗೆಲ್ಲುತ್ತೇವೆ. ಹೆಚ್ಡಿಕೆಗೆ ನಾಯಕತ್ವ ನೀಡುವ ದಾರಿದ್ರ್ಯ ಬಿಜೆಪಿಗಿಲ್ಲ ಎಂದಿದ್ದಾರೆ.ವಿಧಾನಸಭೆಯಲ್ಲಿ ಪ್ರತಿಪಕ್ಷ ನಾಯಕನ ಸ್ಥಾನಕ್ಕೆ ಇನ್ನೂ ಯಾರನ್ನು ಹೈಕಮಾಂಡ್ ಆಯ್ಕೆ ಮಾಡದ ಹಿನ್ನೆಲೆಯಲ್ಲಿ ಜೆಡಿಎಸ್ ಜೊತೆ ಮೈತ್ರಿಕೊಂಡು ಕುಮಾರಸ್ವಾಮಿ ಅವರಿಗೆ