ಪಾರದರ್ಶಕತೆ ಮತ್ತು ದಕ್ಷತೆಯಿಂದ ಕಾರ್ಯನಿರ್ವಹಿಸುತ್ತಿರುವ ಕಾಂಗ್ರೆಸ್ ಸರಕಾರವನ್ನು ಟೀಕಿಸಲು ಯಾವುದೇ ಚುನಾವಣೆ ವಿಷಯಗಳಿಲ್ಲವಾದ್ದರಿಂದ, ಕೋಮುಗಲಭೆಯನ್ನು ಸೃಷ್ಟಿಸಿ ಜಯಗಳಿಸಲು ಬಿಜೆಪಿ ಪ್ರಯತ್ನಿಸುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ಜಿಲ್ಲೆಯ ಸುಳೇಬಾವಿ ಗ್ರಾಮದಲ್ಲಿ ಆಯೋಜಿಸಲಾದ ಪಕ್ಷದ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿದ ಅವರು, ಬಿಜೆಪಿಯವರಿಗೆ ಮುಂಬರುವ ಚುನಾವಣೆಯಲ್ಲಿ ಜಯ ದೊರೆಯುವುದಿಲ್ಲ ಎನ್ನುವುದು ಖಾತರಿಯಾಗಿದೆ ಎಂದು ತಿಳಿಸಿದ್ದಾರೆ. ಭ್ರಮನಿರಸನಗೊಂಡಿರುವ ಬಿಜೆಪಿ ನಾಯಕರು ಸಮುದಾಯಗಳಲ್ಲಿ ಒಡಕು ಮೂಡಿಸಿ ಹಿಂಸಾಚಾರವೆಬ್ಬಿಸುವ ಹುನ್ನಾರ ನಡೆಸಿದ್ದಾರೆ ಎಂದು ಟೀಕಿಸಿದ್ದಾರೆ.