ಕೋಲಾರ : ರಾಜ್ಯದಲ್ಲಿರುವ ದೋಸ್ತಿ ಸರ್ಕಾರವನ್ನು ಉರುಳಿಸಲು ಬಿಜೆಪಿ ಹೈಕಮಾಂಡ್ ರಾಜ್ಯ ಬಿಜೆಪಿ ನಾಯಕರಿಗೆ ಸೂಚನೆ ನೀಡಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣಬೈರೇಗೌಡ ಹೊಸ ಬಾಂಬ್ ಸಿಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೈತ್ರಿ ಸರ್ಕಾರ ಸುಭದ್ರವಾಗಿ ನಡೆಯುತ್ತಿದ್ದರೂ ಬಿಜೆಪಿ ಮಾತ್ರ ಸರ್ಕಾರವನ್ನು ಉರುಳಿಸುವ ಕೆಲಸ ನಿರಂತರವಾಗಿ ಮಾಡುತ್ತಿದ್ದಾರೆ. ಜನರಿಗೆ ಬಿಜೆಪಿ ಬಗ್ಗೆ ತಪ್ಪು ಸಂದೇಶ ಹೋಗಬಾರದೆಂದು ನಾವು ಸರ್ಕಾರ ಬೀಳಿಸಲ್ಲ, ಅದಾಗಿಯೇ ಬೀಳುತ್ತದೆ ಎನ್ನುತ್ತಿದ್ದಾರೆ. ಆದರೆ ರಾಜ್ಯದಲ್ಲಿರುವ ಮೈತ್ರಿ