ಸಿಎಂ ಆಪ್ತರ ಮೇಲೆ ಹೈಕಮಾಂಡ್ ಗರಂ

ಬೆಂಗಳೂರು| Krishnaveni K| Last Modified ಮಂಗಳವಾರ, 8 ಜೂನ್ 2021 (09:30 IST)
ಬೆಂಗಳೂರು: ರಾಜೀನಾಮೆ ಬಾಂಬ್ ಸಿಡಿಸಿದ ಬೆನ್ನಲ್ಲೇ ಅವರ ಆಪ್ತರು ತಲ್ಲಣಿಸಿಹೋಗಿದ್ದರು. ಹೀಗಾಗಿ ಸಿಎಂ ಪರವಾಗಿ ಸಹಿ ಸಂಗ್ರಹಕ್ಕೆ ಮುಂದಾಗಿದ್ದರು. ಇದಕ್ಕೀಗ ಹೈಕಮಾಂಡ್ ಬ್ರೇಕ್ ಹಾಕಿದೆ.
 

ಯಡಿಯೂರಪ್ಪ ಪರ ಶಕ್ತಿ ಪ್ರದರ್ಶನಕ್ಕೆ ಮುಂದಾದ ಶಾಸಕ ರೇಣುಕಾಚಾರ್ಯ ನೇತೃತ್ವದ ಶಾಸಕರ ತಂಡ ಸಹಿ ಸಂಗ್ರಹಕ್ಕೆ ಮುಂದಾಗಿತ್ತು. ಇದು ಬಿಜೆಪಿ ಹೈಕಮಾಂಡ್ ಗಮನಕ್ಕೆ ಬಂದಿದೆ.
 
ಹೀಗಾಗಿ ಸಹಿ ಸಂಗ್ರಹ ಮಾಡದಂತೆ, ಹಾಗೂ ಯಾವುದೇ ನಾಯಕರೂ ಅನಗತ್ಯ ಹೇಳಿಕೆ ನೀಡದಂತೆ ಸೂಚನೆ ನೀಡಿದ್ದಾರೆ. ಇದರ ಬೆನ್ನಲ್ಲೇ ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಕೂಡಾ ನಮ್ಮಲ್ಲಿ ಅಂತಹ ಸಂಪ್ರದಾಯವಿಲ್ಲ. ಸಹಿ ಸಂಗ್ರಹಕ್ಕೆ ಮುಂದಾಗಿದ್ದರೆ ಅವರನ್ನು ಕರೆಸಿ ಮಾತನಾಡುತ್ತೇವೆ ಎಂದಿದ್ದಾರೆ.
ಇದರಲ್ಲಿ ಇನ್ನಷ್ಟು ಓದಿ :