ರೈತರ ಸಂಪೂರ್ಣ ಸಾಲಮನ್ನಕ್ಕೆ ಆಗ್ರಹಿಸಿ ರಾಮನಗರ ಜಿಲ್ಲಾ ಬಿಜೆಪಿ ವತಿಯಿಂದ ಬೆಂಗಳೂರಿನ ವಿಧಾನ ಸೌಧದ ವರೆಗೆ ಹಮ್ಮಿಕೊಂಡಿದ್ದ ಪಾದಯಾತ್ರೆ ಎರಡನೇ ದಿನಕ್ಕೆ ಕಾಲಿಟ್ಟಿದೆ. ಚನ್ನಪಟ್ಟಣದ ಕೆಂಗಲ್ ಆಂಜನೇಯ ದೇವಾಲಯದಿಂದ ಹೊರಟಿದ್ದ ಪಾದಯಾತ್ರಿಗಳು ಸಂಜೆ ಬಿಡದಿಯ ಮಂಜುನಾಥ ಕಲ್ಯಾಣ ಮಂಟಪದಲ್ಲಿ ತಂಗಿದ್ದು, ಬಿಡದಿಯ ಬಾಲಗಾಂಗಧರನಾಥಸ್ವಾಮಿ ಪುತ್ತಳಿಗೆ ಮಾಲರ್ಪಣೆ ಮಾಡಿ, ತಮ್ಮ ಎರಡನೇ ದಿನದ ಪಾದಯಾತ್ರೆ ಆರಂಭಿಸಿದ್ರು. ರಾಮನಗರ ಜಿಲ್ಲಾ ಬಿಜೆಪಿ ಅಧ್ಯಕ್ಷ ರುದ್ರೇಶ್, ಬಿಜೆಪಿ ಮುಖಂಡ ಕೆ.ಶಿವರಾಮ್ ನೇತೃತ್ವದಲ್ಲಿ ನೂರಾರು ಮಂದಿ