ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಯನ್ನು ಹಾಳು ಮಾಡಲು ಬಿಜೆಪಿ ಮುಂದಾಗಿದೆ. ಅಶಾಂತಿ ಉಂಟು ಮಾಡುವುದೇ ಬಿಜೆಪಿಯ ಸಿದ್ಧಾಂತವಾಗಿದೆ ಎಂದು ಕಾಂಗ್ರೆಸ್ ರಾಜ್ಯ ಉಸ್ತುವಾರಿ ಕೆ.ಸಿ.ವೇಣುಗೋಪಾಲ ಹೇಳಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಮಾತನಾಡಿದ ಅವರು, ಸಂಸದ ಪ್ರತಾಪಸಿಂಹ ಅವರ ವಿಡಿಯೋ ನೋಡಿದ್ದೇನೆ. ರಾಷ್ಟ್ರೀಯ ಅಧ್ಯಕ್ಷರೇ ಆ ರೀತಿ ಹೇಳಿದರೆ ಹೇಗೆ?, ಕೋಮುಭಾವನೆ ಕೆರಳಿಸಲು ಅವರು ಯತ್ನಿಸುತ್ತಿದ್ದಾರೆ. ಅಭಿವೃದ್ಧಿ ವಿಚಾರಗಳನ್ನು ಮಾತನಾಡದೆ ಕೆಲವೇ ವಿಚಾರಗಳಿಟ್ಟುಕೊಂಡು ರಸ್ತೆಗಿಳಿದ್ದಾರೆ ಎಂದಿದ್ದಾರೆ. ಪಕ್ಷವೆಂದ ಮೇಲೆ ಸಣ್ಣಪುಟ್ಟ ಸಮಸ್ಯೆಗಳಿರುತ್ತವೆ. ಅವೆಲ್ಲಾ ಸಾಮಾನ್ಯ