ಸಿಎಂ ಗ್ರಾಮವಾಸ್ತವ್ಯ ಭೇಟಿಗೂ ಮುನ್ನವೇ ಬಿಜೆಪಿ ಪ್ರತಿಭಟನೆಯ ಬಿಸಿ ಮುಟ್ಟಿಸಿದೆ.ಯಾದಗಿರಿ ಜಿಲ್ಲೆಯ ಚಂಡರಕಿ ಗ್ರಾಮಕ್ಕೆ ಸಿಎಂ ಗ್ರಾಮ ವಾಸ್ತವ್ಯಕ್ಕೆ ಆಗಮಿಸಿದ್ದಾರೆ. ಆದರೆ ಸಿಎಂಗೆ ಬಿಜೆಪಿ ಪ್ರತಿಭಟನೆಯ ಬಿಸಿ ಮುಟ್ಟಿಸಿದೆ.ಸೇಡಂ ಕ್ಷೇತ್ರದ ಬಿಜೆಪಿ ಶಾಸಕ ರಾಜಕುಮಾರ ಪಾಟೀಲ ತೇಲ್ಕೂರ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.ಹೈದ್ರಾಬಾದ್ ಕರ್ನಾಟಕ ಪ್ರದೇಶದ ರೈತರು ಹಾಗೂ ಈ ಭಾಗದ ಸಮಸ್ಯೆಗಳ ಬಗ್ಗೆ ಸಿಎಂ ಗಮನ ಹರಿಸುತ್ತಿಲ್ಲ. ಹೀಗಾಗಿ ಸಿಎಂ ಗಮನ ಸೆಳೆಯುವ ನಿಟ್ಟಿನಲ್ಲಿ ಯಾನಾಗುಂದಿಯಿಂದ ಚಂಡರಕಿ ಗ್ರಾಮದವರೆಗೆ ಪಾದಯಾತ್ರೆ