ಸದನದಲ್ಲಿ ಹೋರಾಟಕ್ಕೆ ಬಿಜೆಪಿ ಸಜ್ಜಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ. ದಾವಣಗೆರೆಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಭೀಕರ ಬರಗಾಲ ಇದೆ, ಕಬ್ಬಿನ ಬೆಳೆಗಾರರ ಕೂಗಿಗೆ ಈ ರಾಜ್ಯ ಸರ್ಕಾರ ಕಿವಿ ಕೊಡ್ತಿಲ್ಲ.ಅದೇ ರೀತಿ ಉತ್ತರ ಕರ್ನಾಟಕದ ಅಭಿವೃದ್ಧಿ ಬಗ್ಗೆ ಮರೆತಿದೆ. ಶಾಸಕರಿಗೆ ಬಿಡುಗಡೆ ಆಗ್ಬೇಕಾಗಿದ್ದ ಅನುದಾನ ಕೂಡ ಬಿಡುಗಡೆಯಾಗಿಲ್ಲ. ಇಲ್ಲಿ ತನಕ ಶಾಸಕರಿಗೆ ಒಂದು ರೂಪಾಯಿ ಅನುದಾನವನ್ನು ಈ ಸರ್ಕಾರ ಬಿಡುಗಡೆ ಮಾಡಿಲ್ಲ,ಈ ಸರ್ಕಾರ ರೈತ ವಿರೋಧಿ, ಬಡವಿರೋಧಿ