ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಬಜರಂಗದಳ ನಿಷೇಧ ಬಗ್ಗೆ ಉಲ್ಲೇಖ ಹಿನ್ನೆಲೆ ಕಾಂಗ್ರೆಸ್ ಪ್ರಣಾಳಿಕೆ ನೋಡಿ ಬಿಜೆಪಿಯವರಿಗೆ ಗಾಬರಿ ಆಗಿದೆ ಎಂದು KPCC ಅಧ್ಯಕ್ಷ D.K. ಶಿವಕುಮಾರ್ ವ್ಯಂಗ್ಯವಾಡಿದ್ದಾರೆ. ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಮಾತನಾಡಿದ ಅವರು, ಬಜರಂಗದಳಕ್ಕೂ ಆಂಜನೇಯನಿಗೂ ವ್ಯತ್ಯಾಸ ಇಲ್ವಾ?.. ಬಜರಂಗದಳ ಒಂದು ರಾಜಕೀಯ ಪಕ್ಷದ ವಿಭಾಗ. ಹನುಮಂತನ ಹೆಸರು ಇಟ್ಟುಕೊಂಡವರೆಲ್ಲಾ ಆಂಜನೇಯ ಆಗಲ್ಲ. ಬಜರಂಗದಳದವರು ನೈತಿಕ ಪೊಲೀಸ್ಗಿರಿ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ರು.. ದೇವರ ಹೆಸರನ್ನು ರಾಜಕೀಯವಾಗಿ ಬಳಸಿಕೊಳ್ಳಲು ಬಿಜೆಪಿ ಯತ್ನಿಸುತ್ತಿದೆ.