ಬಿಜೆಪಿ ಅತ್ಯಂತ ದುರ್ಬಲ ಪಕ್ಷವಾಗಿದ್ದು ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಅಭ್ಯರ್ಥಿಗಳೇ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಲೇವಡಿ ಮಾಡಿದ್ದಾರೆ. ಕಾಂಗ್ರೆಸ್ ಪಕ್ಷ ಆಯೋಜಿಸಿದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷಕ್ಕೆ 224 ಕ್ಷೇತ್ರಗಳು ಮಾತ್ರವಲ್ಲ 480 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಹಾಕುವ ತಾಕತ್ತಿದೆ ಎಂದು ತಿಳಿಸಿದ್ದಾರೆ. ಬಿಜೆಪಿ ನಡೆಸುತ್ತಿರುವ ಪರಿವರ್ತನಾ ಯಾತ್ರೆ ಅಟ್ಟರ್ ಫ್ಲಾಪ್. ಯಾತ್ರೆಗೆ ಜನರೇ ಸೇರುತ್ತಿಲ್ಲ. ಬಿಜೆಪಿ ಬಗ್ಗೆ ಜನರಿಗೆ ನಿರಾಶಾಭಾವನೆ ಉಂಟಾಗಿದೆ ಎಂದರು.