ಸರ್ಕಾರದಿಂದ ಯಾರಿಗೆ ಒಂದು ರೂಪಾಯಿ ಹಣ ಕೊಟ್ಟರೂ ಅದಕ್ಕೆ ಲೆಕ್ಕ, ಹೊಣೆಗಾರಿಕೆ ಇರಬೇಕು. ಫಲಾನುಭವಿ ಆಗುವವರು ಮತದಾರರ ಗುರುತಿನ ಚೀಟಿ, ಬ್ಯಾಂಕ್ ಖಾತೆ, ಆಧಾರ್ ಕಾರ್ಡ್ ಹೊಂದಿರಬೇಕು. ಬೇರೆಯವರ ಬ್ಯಾಂಕ್ ಖಾತೆಗೆ ಹಣ ನೀಡಲಾಗುವುದಿಲ್ಲ. ಮನೆ ಯಜಮಾನಿ ಯಾರು ಎಂದು ಮನೆಯವರೇ ತೀರ್ಮಾನ ಮಾಡಬೇಕು. ಅವರ ಮನೆ ವಿಚಾರದಲ್ಲಿ ನಾವು ಹಸ್ತಕ್ಷೇಪ ಮಾಡುವುದಿಲ್ಲ. ಮತದಾರರ ಗುರುತಿನಿ ಚೀಟಿ, ಎಪಿಎಲ್, ಬಿಪಿಎಲ್ ಕಾರ್ಡ್ ಗಳಲ್ಲಿ ಯಾವ ಮನೆಯಲ್ಲಿ ಯಾರೆಲ್ಲಾ ಇದ್ದಾರೆ