ಬೆಂಗಳೂರು : ಬಿಜೆಪಿ ಕಾರ್ಯಕರ್ತ ಪ್ರವೀಣ್ ಹತ್ಯೆ ಹಿನ್ನೆಲೆಯಲ್ಲಿ ಸ್ಥಗಿತಗೊಂಡಿದ್ದ ಬಿಜೆಪಿ ಜನೋತ್ಸವ ಕಾರ್ಯಕ್ರಮಕ್ಕೆ ಸಿದ್ಧತೆ ಮತ್ತೆ ಪ್ರಾರಂಭವಾಗಿದೆ. ಸೆಪ್ಟೆಂಬರ್ 8ಕ್ಕೆ ನಿಂತು ಹೋಗಿದ್ದ ಜನೋತ್ಸವ ನಡೆಯಲಿದೆ ಎಂದು ಆರೋಗ್ಯ ಸಚಿವ ಸುಧಾಕರ್ ತಿಳಿಸಿದರು.ಬೆಂಗಳೂರಿನಲ್ಲಿ ಮಾತನಾಡಿದ ಅವರು, ಬಿಜೆಪಿ 3 ವರ್ಷದ ಆಡಳಿತದ ಸಂಭ್ರಮವನ್ನು ಹಂಚಿಕೊಳ್ಳಲು ಸೆಪ್ಟಂಬರ್ 8 ರಂದು ಜನೋತ್ಸವ ಕಾರ್ಯಕ್ರಮ ನಡೆಸಲಾಗುತ್ತದೆ. ರಾಷ್ಟ್ರೀಯ ಅಧ್ಯಕ್ಷರಾದ ಜೆ.ಪಿ.ನಡ್ಡಾ ಜೊತೆಗೆ ಹಲವು ರಾಷ್ಟ್ರೀಯ ನಾಯಕರು ಈ ಕಾರ್ಯಕ್ರಮಕ್ಕೆ ಆಗಮಿಸಲಿದ್ದಾರೆ