2024ರ ಲೋಕಸಭೆ ಚುನಾವಣೆಯಲ್ಲಿ ಜೆಡಿಎಸ್ ಜತೆ ಮೈತ್ರಿ ಮಾಡಿಕೊಳ್ಳುವ ಕುರಿತು ಬಿಜೆಪಿ ಗಂಭೀರ ಚಿಂತನೆ ನಡೆಸಿದೆ. ಚುನಾವಣೆಯಲ್ಲಿ ಗೆದ್ದೇ ಗೆಲ್ಲುವ 15 ರಿಂದ 18 ಕ್ಷೇತ್ರಗಳ ಬಗ್ಗೆ ಮಾತ್ರ ಬಿಜೆಪಿ ಹೆಚ್ಚಿನ ಗಮನ ಹರಿಸಲಿದೆ. ಜೆಡಿಎಸ್ ಗೆದ್ದೇ ಗೆಲ್ಲಬಹುದಾದ 5-6 ಕ್ಷೇತ್ರಗಳನ್ನು ಆ ಪಕ್ಷಕ್ಕೆ ಬಿಟ್ಟುಕೊಟ್ಟು ಮೈತ್ರಿ ಅಥವಾ ಒಳ ಒಪ್ಪಂದ ಮಾಡಿಕೊಳ್ಳುವ ಬಗ್ಗೆಯೂ ಪಕ್ಷದೊಳಗೆ ಚರ್ಚೆ ನಡೆದಿದೆ. ಇದರಿಂದ ಎರಡೂ ಪಕ್ಷಗಳಿಗೂ ಲಾಭ ಆಗುತ್ತದೆ ಎಂದು ಮೂಲಗಳು ಹೇಳಿವೆ.