ಲೋಕಸಭೆ ಚುನಾವಣೆಗೆ ಕರ್ನಾಟಕದಲ್ಲಿ BJP JDS ಮೈತ್ರಿ ಮಾತುಕತೆ ನಡೆಯುತ್ತಿದೆ. ಜೆಡಿಎಸ್ಗೆ ನಾಲ್ಕು ಸೀಟು ಬಿಟ್ಟು ಕೊಡಲು ಅಮಿತ್ ಶಾ ಹೇಳಿದ್ದಾಗಿ ಈಗಾಗಲೇ ಮಾಜಿ ಸಿಎಂ ಯಡಿಯೂರಪ್ಪ ಬಹಿರಂಗಪಡಿಸಿದ್ದಾರೆ. ಒಂದೊಮ್ಮೆ ಈ ಮೈತ್ರಿ ಮಾತುಕತೆ ಯಶಸ್ವಿಯಾದರೆ ಕರ್ನಾಟಕದಲ್ಲಿ ಎಲ್ಲಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಒಂದೇ ಒಂದು ಸೀಟು ಗೆಲ್ಲದಂತೆ ಮಾಡಲು ಅನುಕೂಲವಾಗಲಿದೆ ಎಂದು ಲೆಕ್ಕಾಚಾರವಾಗಿದೆ.ಆದರೆ, ಜೆಡಿಎಸ್ ಕೇಳಿದಷ್ಟು ಸೀಟುಗಳನ್ನು ಬಿಟ್ಟುಕೊಡಲು ಬಿಜೆಪಿ ರಾಜ್ಯ ನಾಯಕರು ಒಲವು ಹೊಂದಿಲ್ಲ ಎಂದು ತಿಳಿದುಬಂದಿದೆ.