ಬಳ್ಳಾರಿ : ಕರ್ನಾಟಕದಲ್ಲಿ 4 ತಿಂಗಳ ಆಡಳಿತ ನೋಡಿದರೆ ಗೊತ್ತಾಗುತ್ತದೆ, ಎಲ್ಲರೂ ಸೇರಿ ಕಾಂಗ್ರೆಸ್ ವಿರೋಧ ಮಾಡುವ ಅವಶ್ಯಕತೆ ಇದೆ. ಹೀಗಾಗಿ ಮೈತ್ರಿ ಮಾಡಿಕೊಳ್ಳಲು ಮುಂದಾಗಿದ್ದೇವೆ. ಆದರೆ ಮೈತ್ರಿ ಮಾತುಕತೆ ಇನ್ನೂ ಪೂರ್ಣಗೊಂಡಿಲ್ಲ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಬಳ್ಳಾರಿಯಲ್ಲಿ ಮಾತನಾಡಿದ ಅವರು ಮೈತ್ರಿ ವಿಚಾರವಾಗಿ ನಿನ್ನೆ ಕುಮಾರಸ್ವಾಮಿ ಹೇಳಿಕೆ ಗಮನಿಸಿದರೆ, ಈ ಕುರಿತು ಚೆರ್ಚೆ ಆಗಬೇಕು. ಮೈತ್ರಿ ಮಾಡಿಕೊಳ್ಳುವ ವಿಚಾರ ಸುದೀರ್ಘ ಚೆರ್ಚೆ ಆಗಬೇಕು.