ಮತಎಣಿಕೆ: ಬಿಜೆಪಿ 17 ಕ್ಷೇತ್ರಗಳಲ್ಲಿ ಮುನ್ನಡೆ, ಕಾಂಗ್ರೆಸ್ 9 ಮುನ್ನಡೆ, ಜೆಡಿಎಸ್ 1

guna| Last Updated: ಶುಕ್ರವಾರ, 16 ಮೇ 2014 (15:13 IST)
ಬೆಂಗಳೂರು:ಲೋಕಸಭೆ ಚುನಾವಣೆಯ ಮತಎಣಿಕೆ ಬೆಳಿಗ್ಗೆ 8 ಗಂಟೆಗೆ ಆರಂಭವಾಗಿದ್ದು, ಬಿಜೆಪಿ ಕರ್ನಾಟಕದ 17 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದು, ಕಾಂಗ್ರೆಸ್ 9 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಜೆಡಿಎಸ್ 2
ಕ್ಷೇತ್ರದಲ್ಲಿ ಮುನ್ನಡೆ ಸಾಧಿಸಿದೆ.ಮಂಗಳೂರು ಕ್ಷೇತ್ರದಲ್ಲಿ ಜನಾರ್ದನ ಪೂಜಾರಿ ಹಿನ್ನಡೆ ಅನುಭವಿಸಿದ್ದಾರೆ. ಶಿವಮೊಗ್ಗದಲ್ಲಿ ಬಿಜೆಪಿಯ ಯಡಿಯೂರಪ್ಪ 61,822 ಮತಗಳನ್ನು ಗಳಿಸಿದ್ದು, 30,187 ಮತಗಳ ಅಂತರದಿಂದ ಮುನ್ನಡೆ ಸಾಧಿಸಿದ್ದಾರೆ.
ಹಾಸನದಲ್ಲಿ ಜೆಡಿಎಸ್ ಅಭ್ಯರ್ಥಿ ಎಚ್.ಡಿ. ದೇವೇಗೌಡರು ಮುನ್ನಡೆ ಕಾಯ್ದುಕೊಂಡಿದ್ದಾರೆ.

ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಬಿಜೆಪಿಯ ಅನಂತಕುಮಾರ್ ಮುನ್ನಡೆ ಸಾಧಿಸಿದ್ದು, ಕಾಂಗ್ರೆಸ್‌ನ ನಂದನ್ ನಿಲೇಕಣಿ ಹಿನ್ನಡೆ ಅನುಭವಿಸಿದ್ದಾರೆ. ಬಳ್ಳಾರಿಯಲ್ಲಿ ಒಂದೇ ಸುತ್ತಿನ ಮತಎಣಿಕೆಯಲ್ಲಿ 1200 ಮತಗಳು ನೋಟಾದಲ್ಲಿ ದಾಖಲೆಯಾಗಿದೆ. ತುಮಕೂರಿನಲ್ಲಿ
ಜೆಡಿಎಸ್‌ನ ದಿವಂಗತ ಕೃಷ್ಣಪ್ಪ ಮುನ್ನಡೆ ಸಾಧಿಸಿದ್ದಾರೆ. ವೀರಪ್ಪ ಮೊಯ್ಲಿ ಚಿಕ್ಕಬಳ್ಳಾಪುರದಲ್ಲಿ ಮುನ್ನಡೆ ಸಾಧಿಸಿದ್ದಾರೆ. ಗುಲ್ಬರ್ಗದಲ್ಲಿ ಮಲ್ಲಿಕಾರ್ಜುನ ಖರ್ಗೆ ಮುನ್ನಡೆ ಸಾಧಿಸಿದ್ದಾರೆ.ಇದರಲ್ಲಿ ಇನ್ನಷ್ಟು ಓದಿ :