ಕರ್ನಾಟಕ ಮತ್ತೊಂದು ಕಾಶ್ಮೀರವಾಗುತ್ತಿದೆ ಹಾಗೂ ರಾಜ್ಯದ ಜನರು ಮುಂದೆ ಏನೇನು ಆಗುತ್ತದೆಯೋ ಎನ್ನುವ ಆತಂಕದಲ್ಲಿ ಜೀವಿಸುತ್ತಿದ್ದಾರೆ ಎಂದು ಬಿಜೆಪಿ ಮುಖಂಡರು ಹೇಳಿದ್ದಾರೆ. ಹಾವೇರಿಯಲ್ಲಿ ವಿಧಾನ ಪರಿಷತ್ ವಿಪಕ್ಷ ನಾಯಕ ಕೋಟ ಶ್ರೀನಿವಾಸ್ ಪೂಜಾರಿ ಈ ಹೇಳಿಕೆ ನೀಡಿದ್ದಾರೆ. ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಹಿರೂರ ಗ್ರಾಮದಲ್ಲಿ ಗಣರಾಜ್ಯೋತ್ಸವದ ವೇಳೆ ಗಲಾಟೆ ಮಾಡಿದ್ದು, ತೀವ್ರ ಖಂಡನೀಯ ಎಂದು ಶ್ರೀನಿವಾಸ್ ಪೂಜಾರಿ ತಿಳಿಸಿದರು. ಇಂದು ಗ್ರಾಮಕ್ಕೆ ಭೇಟಿ ನೀಡಿ ಮಾತನಾಡಿದ ಅವರು, ವಿದ್ಯಾರ್ಥಿಗಳ ಮೇಲೆ ಹಲ್ಲೆ