ವಾಯುವಿಹಾರಕ್ಕೆ ತೆರಳುತ್ತಿದ್ದಾಗ ದುಷ್ಕರ್ಮಿಗಳಿಂದ ದಾಳಿಗೊಳಗಾಗಿದ್ದ ಬಿಜೆಪಿ ಮುಖಂಡನ ಪುತ್ರ ಕಾರ್ತಿಕ್ ರಾಜ್(27) ಚಿಕಿತ್ಸೆ ಫಲಕಾರಿಯಾಗದೆ ದುರ್ಮರಣವನ್ನಪ್ಪಿದ್ದಾರೆ. ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಶನಿವಾರ ಅವರ ಮೇಲೆ ದಾಳಿ ನಡೆದಿತ್ತು. ಸುದರ್ಶನ ನಗರ ನಿವಾಸಿ, ತಾಲ್ಲೂಕು ಪಂಚಾಯತ್ ಮಾಜಿ ಉಪಾಧ್ಯಕ್ಷ ಹಾಗೂ ಬಿಜೆಪಿ ಮುಖಂಡ ಉಮೇಶ್ ಪೂಜಾರಿ ಅವರ ಪುತ್ರ ರಾಗಿದ್ದ ಕಾರ್ತಿಕ್ ಶನಿವಾರ ಮುಂಜಾನೆ ವಾಯುವಿಹಾರಕ್ಕೆ ಹೋಗುತ್ತಿದ್ದಾಗ ಬೈಕ್ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ನಡುರಸ್ತೆಯಲ್ಲೇ ಅವರ ಮೇಲೆ ಮಾರಕಾಸ್ತ್ರಗಳಿಂದ