ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಸೇರಿದಂತೆ ಬಿಜೆಪಿ ನಾಯಕರು ಸಂಸ್ಕಾರವಿಲ್ಲದ ಪುಡಾರಿಗಳು ಎಂದು ಉನ್ನತ ಶಿಕ್ಷಣ ಖಾತೆ ಸಚಿವ ಬಸವರಾಜ ರಾಯರೆಡ್ಡಿ ವಾಗ್ದಾಳಿ ನಡೆಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ಮುಖ್ಯಮಂತ್ರಿಯಾಗಿರುವ ಸಿಎಂ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ನಾಯಕರು ಮನಬಂದಂತೆ ಟೀಕಿಸುತ್ತಾರೆ. ಇದು ಅವರ ಸಂಸ್ಕ್ರತಿಯನ್ನು ತೋರಿಸುತ್ತದೆ ಎಂದು ತಿರುಗೇಟು ನೀಡಿದ್ದಾರೆ. ಯಡಿಯೂರಪ್ಪ, ಸಿಎಂ ಸಿದ್ದರಾಮಯ್ಯರನ್ನು ಬಚ್ಚಾ ಎನ್ನುತ್ತಾರೆ. ಕೇಂದ್ರ ಸಚಿವ ಅನಂತಕುಮಾರ್ ಹೆಗಡೆ ವೋಟಿಗಾಗಿ ಸಿಎಂ ಬೂಟು ನೆಕ್ತಾರೆ