ಬೆಂಗಳೂರು : ಮೊದಲಿನಿಂದಲೂ ಕಾಂಗ್ರೆಸ್ ಪಕ್ಷದಲ್ಲಿ ಇದ್ದ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರನ್ನು ಬಿಜೆಪಿ ನಾಯಕರು ಬ್ರೈನ್ ವಾಶ್ ಮಾಡಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಆರೋಪಿಸಿದ್ದಾರೆ. ರೆಸಾರ್ಟಿನಲ್ಲಿ ಏರ್ಪಡಿಸಿದ್ದ ಸಭೆಯ ಬಳಿಕ ಮಾತನಾಡಿದ ಅವರು, ನಮ್ಮ ಶಾಸಕರ ವಿರುದ್ಧ ಬಿಜೆಪಿ ನಾಯಕರು ಕುತಂತ್ರ ನಡೆಸಿದ್ದಾರೆ. ಬಿಜೆಪಿ ಸರ್ಕಾರ ಹಾಗು ರಾಷ್ಟ್ರ ನಾಯಕರ ಸಹಾಯದಿಂದಲೇ ಕೃತ್ಯ ನಡೆದಿದೆ. ನಮ್ಮ ಶಾಸಕರಿಗೆ ಆಸೆ ತೋರಿಸಿ ಬ್ರೈನ್ ವಾಶ್ ಮಾಡಿದ್ದಾರೆ