ಕಳೆದ ನಾಲ್ಕುವರೆ ವರ್ಷಗಳಲ್ಲಿ ಕಾಂಗ್ರೆಸ್ ಸರಕಾರ ಭ್ರಷ್ಟಾಚಾರ ಮುಕ್ತ, ಪಾರದರ್ಶಕ ಅಡಳಿತ ನೀಡಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಸರಕಾರದ ಅವಧಿಯಲ್ಲಿ ನಡೆದ ಯಾವುದೇ ಭ್ರಷ್ಟಾಚಾರವನ್ನು ಸಾಬೀತುಪಡಿಸಿದಲ್ಲಿ ರಾಜಕೀಯ ಮಾತನಾಡುವುದನ್ನು ಬಿಟ್ಟು ಬಿಡುತ್ತೇನೆ ಎಂದು ಸವಾಲ್ ಹಾಕಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ನಮ್ಮ ಸರಕಾರವನ್ನು ಟೀಕಿಸುವ ಮೊದಲು ರಾಷ್ಟ್ರೀಕೃತ ಬ್ಯಾಂಕ್ಗಳಲ್ಲಿರುವ ರೈತರ ಸಾಲ ಮನ್ನಾ ಮಾಡಿಸಲಿ, ಮಹದಾಯಿ ವಿವಾದ ಇತ್ಯರ್ಥಗೊಳಿಸಲಿ ಎಂದು ಗುಡುಗಿದರು.