ಬೆಂಗಳೂರು (ಆ.14): ಇತಿಹಾಸದ ಬಗ್ಗೆ ಕನಿಷ್ಠ ಜ್ಞಾನವೂ ಬಿಜೆಪಿ ನಾಯಕರಿಗೆ ಇಲ್ಲ. ಇದ್ದಿದ್ದರೆ ದೇಶಕ್ಕಾಗಿ ಪ್ರಾಣ ತೆತ್ತವರ ಬಗ್ಗೆ ಹಗುರವಾಗಿ ಮಾತನಾಡುತ್ತಿರಲಿಲ್ಲ. ಈ ಬಿಜೆಪಿಯವರು ಇತಿಹಾಸ ತಿರುಚುವುದರಲ್ಲಿ, ಸುಳ್ಳು ಹೇಳಿ ಸಮಾಜದ ದಾರಿ ತಪ್ಪಿಸುವುದರಲ್ಲಿ ಪ್ರವೀಣರು ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ಚೌಡಯ್ಯ ಮೆಮೋರಿಯಲ್ ಹಾಲ್ನಲ್ಲಿ ಶುಕ್ರವಾರ ಏರ್ಪಡಿಸಿದ್ದ ಯುವ ಕಾಂಗ್ರೆಸ್ ಅಧ್ಯಕ್ಷ ರಕ್ಷಾ ರಾಮಯ್ಯ ಅವರ ಅಧಿಕಾರ ಸ್ವೀಕಾರ ಸಮಾರಂಭದಲ್ಲಿ ಇಂದಿರಾ ಗಾಂಧಿ ಕುರಿತ ಬಿಜೆಪಿ