ವಿಜಯಪುರ: ಸಿ.ಎಂ ಸಿದ್ದರಾಮಯ್ಯ ಅವರು ಬಿಜೆಪಿ ನಾಯಕರ ಬಗ್ಗೆ ವ್ಯಂಗ್ಯವಾಗಿ ಮಾತನಾಡುತ್ತಾ ಮಹದಾಯಿ ವಿಚಾರದಲ್ಲಿ ಅವರು ಕಣ್ಣೀರು ಒರೆಸುವ ನಾಟಕವಾಡಿ ತಂತ್ರ ರೂಪಿಸುತ್ತಿದ್ದಾರೆ ಎಂದು ಹೇಳಿದ್ದಾರೆ. ಮುದ್ದೇಬಿಹಾಳ ಪಟ್ಟಣದಲ್ಲಿ ಬುಧವಾರ ನಡೆದ ಕಾಂಗ್ರೆಸ್ ಸಮಾವೇಶಕ್ಕೂ ಮೊದಲು ಸುದ್ಧಿಗಾರರೊಂದಿಗೆ ಮಾತನಾಡಿದ ಅವರು ಈ ಹಿಂದೆ ಪ್ರಧಾನಿ ಮೋದಿಯವರ ಬಳಿ ಹೋಗಿ ಮಹದಾಯಿ ಸಮಸ್ಯೆ ಯನ್ನು ಪರಿಹರಿಸುವ ಬಗ್ಗೆ ಹಲವು ಬಾರಿ ಮನವಿ ಮಾಡಿಕೊಂಡರೂ, ಇಲ್ಲಿಯವರೆಗೆ ಇತ್ಯರ್ಥವಾಗದೆ, ಚುನಾವಣೆ ಹಿನ್ನೆಲೆಯಲ್ಲಿ ಪರಿಹಾರ ಕ್ರಮ