ಬಿಜೆಪಿ ನಾಯಕರು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಪ್ರಶಂಸಿಸಿದ ಘಟನೆ ಶುಕ್ರವಾರ ಯಲಹಂಕದಲ್ಲಿ ನಡೆದ ಜನಸ್ಪಂದನ ಕಾರ್ಯಕ್ರಮದ ವೇಳೆ ನಡೆದಿದೆ. ಯಲಹಂಕ ಶಾಸಕ ಎಸ್.ಆರ್. ವಿಶ್ವನಾಥ್ ಹಾಗೂ ದಾಸರಹಳ್ಳಿ ಶಾಸಕ ಮುನಿರಾಜು ಡಿಕೆಶಿ ಕಾರ್ಯವೈಖರಿಯ ಬಗ್ಗೆ ಮುಕ್ತಕಂಠದಿಂದ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.