ಉಸ್ತುವಾರಿ ಮುಂದೆ ಶಕ್ತಿಪ್ರದರ್ಶನ ಮಾಡಲು ಮುಂದಾದ ಸಿಎಂ ಬಣ

ಬೆಂಗಳೂರು| Krishnaveni K| Last Modified ಮಂಗಳವಾರ, 15 ಜೂನ್ 2021 (11:16 IST)
ಬೆಂಗಳೂರು: ಸಿಎಂ ಬದಲಾವಣೆಗೆ ಆಗ್ರಹಿಸುತ್ತಿರುವ ವಿರೋಧಿಗಳಿಗೆ ಸೆಡ್ಡು ಹೊಡೆಯಲು ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಮುಂದೆ ಶಕ್ತಿ ಪ್ರದರ್ಶನ ಮಾಡಲು ಯಡಿಯೂರಪ್ಪ ಬಣದ ನಾಯಕರು ಮುಂದಾಗಿದ್ದಾರೆ.  
> ಸಿಎಂ ರಾಜಕೀಯ ಕಾರ್ಯದರ್ಶಿ ರೇಣುಕಾಚಾರ್ಯ ನೇತೃತ್ವದಲ್ಲಿ ಶಾಸಕರು ಜೂನ್ 17 ರಂದು ಅರುಣ್ ಸಿಂಗ್ ಭೇಟಿ ಮಾಡಿ ಒಗ್ಗಟ್ಟು ಪ್ರದರ್ಶನ ಮಾಡಲಿದ್ದಾರೆ. ಈ ಬಗ್ಗೆ ರೇಣುಕಾಚಾರ್ಯ ಮಾಹಿತಿ ನೀಡಿದ್ದಾರೆ.>   ಅರುಣ್ ಸಿಂಗ್ ಈಗಾಗಲೇ ಯಡಿಯೂರಪ್ಪನವರೇ ನಮ್ಮ ನಾಯಕ ಎಂದಿದ್ದರು. ಹಾಗಿದ್ದರೂ ಕೆಲವರು ನಾಯಕತ್ವ ವಿಚಾರವನ್ನು ಎಳೆದು ತರುತ್ತಿದ್ದಾರೆ. ಹೀಗಾಗಿ ಒಗ್ಗಟ್ಟು ಪ್ರದರ್ಶಿಸುತ್ತೇವೆ ಎಂದು ರೇಣುಕಾಚಾರ್ಯ ಹೇಳಿದ್ದಾರೆ.ಇದರಲ್ಲಿ ಇನ್ನಷ್ಟು ಓದಿ :