ಬೆಂಗಳೂರು: ಮುಂಬರುವ ವಿಧಾನಸಭೆ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾದ ಬೆನ್ನಲ್ಲೇ ಅಸಮಾಧಾನವೂ ಹೊಗೆಯಾಡಿದೆ.ಚಿಕ್ಕಪೇಟೆಯಲ್ಲಿ ಎನ್ ಆರ್ ರಮೇಶ್, ಶಿವಾಜಿನಗರದಲ್ಲಿ ಕಟ್ಟಾ ಸುಬ್ರಮಣ್ಯ ನಾಯ್ಡುಗೆ ಟಿಕೆಟ್ ನೀಡದ ಹಿನ್ನಲೆಯಲ್ಲಿ ಅಸಮಾಧಾನ ಭುಗಿಲೆದ್ದಿದೆ. ಎನ್ ಆರ್ ರಮೇಶ್ ಬೆಂಬಲಿಗರು ಬೆಂಗಳೂರಿನ ಎನ್ ಆರ್ ಕಾಲೋನಿ, ಯಡಿಯೂರಿನಲ್ಲಿ ಬಂದ್ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.ಈ ಹಿನ್ನಲೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಅಸಮಾಧಾನಗೊಂಡಿರುವ ನಾಯಕರೊಂದಿಗೆ ಮಾತುಕತೆ ನಡೆಸಿದ್ದಾರೆ. ಇನ್ನು ಕೆಲವು ನಾಯಕರು ಮುಂದಿನ