ಕಳೆದ 2013 ರಲ್ಲಿ ಬಿಜೆಪಿಯವರು ಅಧಿಕಾರದಲ್ಲಿದ್ದಾಗ ಬೆಂಗಳೂರು ನಗರವನ್ನು ಗಾರ್ಬೆಜ್ ಸಿಟಿಯಾಗಿಸಿದ್ದರು. ಬಿಬಿಎಂಪಿಯಲ್ಲಿ 8 ಸಾವಿರ ಕೋಟಿ ರೂಪಾಯಿ ಸಾಲ ಮಾಡಿ ಹೋಗಿದ್ದಾರೆ ಎಂದು ಗೃಹಸಚಿವ ರಾಮಲಿಂಗಾರೆಡ್ಡಿ ವಾಗ್ದಾಳಿ ನಡೆಸಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಬಿಎಂಪಿಯಲ್ಲಿ ಬಿಜೆಪಿ ಅಧಿಕಾರದಲ್ಲಿದ್ದಾಗ ಯಾವುದೇ ಅಭಿವೃದ್ಧಿ ಕಾರ್ಯಕೈಗೊಳ್ಳಲಿಲ್ಲ. ರಾಜ್ಯದ ಪ್ರಮುಖ ಐತಿಹಾಸಿಕ ಕಟ್ಟಡಗಳನ್ನು ಒತ್ತೆಯಾಗಿಟ್ಟು ಸಾಲದ ಹಣವನ್ನು ತಿಂದು ತೇಗಿದ್ದಾರೆ ಎಂದು ಗುಡುಗಿದ್ದಾರೆ. ಬಿಬಿಎಂಪಿಗೆ 8 ಸಾವಿರ ಕೋಟಿ ರೂಪಾಯಿ