ಮಂಗಳೂರು: ಬಿಜೆಪಿ ಯುವಮೋರ್ಚ ಹಮ್ಮಿಕೊಂಡಿದ್ದ ಮಂಗಳೂರು ಚಲೋ ಬೈಕ್ ರ್ಯಾಲಿ ಹಾಗೂ ಪಾದಯಾತ್ರೆ ಯಶಸ್ವಿಯಾಗಿದೆ. ಜಿಲ್ಲೆಯಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ನಡುವೆಯೂ ನಿಗದಿಯಂತೆ ಬೈಕ್ ರ್ಯಾಲಿ ಹಾಗೂ ಪಾದಯಾತ್ರೆ ನಡೆಯಿತು. ಯಡಿಯೂರಪ್ಪ ಭಾಷಣ ಮುಗಿಯುತ್ತಿದ್ದಂತೆ ಕಾರ್ಯಕರ್ತರೆಲ್ಲರೂ ಜಿಲ್ಲಾಧಿಕಾರಿ ಕಚೇರಿ ಕಡೆ ಪಾದಯಾತ್ರೆ ಮೂಲಕ ತೆರಳಿದರು. ಇದೇವೇಳೆ ಕೆಲ ಕಾರ್ಯಕರ್ತರು ಬಲವಂತವಾಗಿ ಬೈಕ್ ಗಳ ಮೂಲಕ ರ್ಯಾಲಿ ಹೊರಟರು. ಜಿಲ್ಲಾಧಿಕಾರಿ ಕಚೇರಿ ಬಳಿ ತೆರಳಿದ ಬಿಜೆಪಿ ಕಾರ್ಯಕರ್ತರು, ಮುತ್ತಿಗೆ ಹಾಕಲು ಯತ್ನಿಸಿದರು.