ಶಿವಾಜಿನಗರ : ಡಿಸೆಂಬರ್ 5 ರಂದು ಶಿವಾಜಿನಗರ ಕ್ಷೇತ್ರದ ಉಪಚುನಾವಣೆಯ ಹಿನ್ನಲೆ ಶಿವಾಜಿನಗರದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಗೆಲ್ಲಿಸಲು ಬಿಜೆಪಿ ಮಾಸ್ಟರ್ ಪ್ಲ್ಯಾನ್ ಮಾಡಿದೆ.ಶಿವಾಜಿನಗರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸರವಣ ಕಣಕ್ಕೀಳಿಯುತ್ತಿದ್ದು, ಅವರನ್ನು ಗೆಲ್ಲಿಸಿದ್ರೆ ಅನರ್ಹ ಶಾಸಕ ರೋಷನ್ ಬೇಗ್ ಗೆ ಮಂತ್ರಿಗಿರಿ ನೀಡುವುದಾಗಿ ಬಿಜೆಪಿ ಆಫರ್ ನೀಡಿದೆ ಎನ್ನಲಾಗಿದೆ. ಈ ಬಗ್ಗೆ ಸಿಎಂ ರಾಜಕೀಯ ಕಾರ್ಯದರ್ಶಿ ಎಸ್.ಆರ್.ವಿಶ್ವನಾಥ್ ನಿನ್ನೆ ಬೇಗ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದು, ಏಫ್ರಿಲ್ ನಲ್ಲಿ ವಿಧಾನಪರಿಷತ್ ಸ್ಥಾನ