ಬೆಂಗಳೂರು: ಬಿಜೆಪಿ ಕೋರ್ ಕಮಿಟಿ ಸಭೆ ನಿನ್ನೆ ಬೆಂಗಳೂರಿನಲ್ಲಿ ನಡೆದಿದ್ದು, ಟಿಕೆಟ್ ಹಂಚಿಕೆ ಕುರಿತು ಚರ್ಚೆ ನಡೆದಿದೆ ಎನ್ನಲಾಗಿದೆ.ಆದರೆ ಕೆಲವು ಕ್ಷೇತ್ರಗಳಲ್ಲಿ ಆಕಾಂಕ್ಷಿಗಳ ಪಟ್ಟಿ ದೊಡ್ಡದಾಗಿರುವುದರಿಂದ ಯಾರಿಗೂ ಅಸಮಾಧಾನವಾಗದಂತೆ ಟಿಕೆಟ್ ಫೈನಲ್ ಮಾಡಲು ಇಂದು ದೆಹಲಿಯಲ್ಲಿ ಬಿಜೆಪಿ ನಾಯಕರು ಸಭೆ ಸೇರಲಿದ್ದಾರೆ.ಈ ಸಭೆಯಲ್ಲಿ ಟಿಕೆಟ್ ಬಗ್ಗೆ ಅಂತಿಮ ತೀರ್ಮಾನಗಳನ್ನು ತೆಗೆದುಕೊಳ್ಳುವ ಸಾಧ್ಯತೆಯಿದೆ. ಇದಕ್ಕಾಗಿ ಬಿಜೆಪಿ ರಾಜ್ಯಾದ್ಯಕ್ಷ ಬಿಎಸ್ ಯಡಿಯೂರಪ್ಪ ಸೇರಿದಂತೆ ಪ್ರಮುಖ ನಾಯಕರು ಹೈಕಮಾಂಡ್ ಜತೆ ಇಂದು ಚರ್ಚೆ ನಡೆಸಲಿದೆ.