ಆಮ್ ಆದ್ಮಿ ಪಕ್ಷದ ಅಧ್ಯಕ್ಷ ಮತ್ತು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಗುಜರಾತ್ ವಿಧಾನಸಭಾ ಚುನಾವಣೆಯ ಪ್ರಚಾರವನ್ನು ಪ್ರಾರಂಭಿಸಿದ್ದಾರೆ. ಈ ವರ್ಷದ ಡಿಸೆಂಬರ್ನಲ್ಲಿ ಗುಜರಾತ್ ವಿಧಾನಸಭೆ ಚುನಾವಣೆ ನಡೆಯಲಿದೆ ಎಂದು ನಿರೀಕ್ಷಿಸಲಾಗಿದೆ. ಗುಜರಾತ್ನಲ್ಲಿ ತಮ್ಮ ಆಮ್ ಆದ್ಮಿ ಪಕ್ಷದ ಪ್ರಚಾರದ ನಡುವೆಯೇ ಅರವಿಂದ್ ಕೇಜ್ರಿವಾಲ್ BJP ಬಗ್ಗೆ ಶಾಕಿಂಗ್ ಹೇಳಿಕೆಯೊಂದನ್ನು ನೀಡಿದ್ದಾರೆ. ಗುಜರಾತ್ನಲ್ಲಿ BJPಯ ಬಹಳಷ್ಟು ಕಾರ್ಯಕರ್ತರು ಮತ್ತು ಮುಖಂಡರು ನನ್ನನ್ನು ರಹಸ್ಯವಾಗಿ ಭೇಟಿಯಾಗುತ್ತಿದ್ದಾರೆ. ಮುಂಬರುವ ಚುನಾವಣೆಯಲ್ಲಿ ತಮ್ಮ ಪಕ್ಷವು