ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ರಾಜ್ಯ ಬಿಜೆಪಿ ಕಛೇರಿಯಲ್ಲಿ ನಡೆದ ಸಮಾರಂಭದಲ್ಲಿ ಅಲ್ಪಸಂಖ್ಯಾತ ಯುವಮೋರ್ಚಾ ಘಟಕದ ಅಧ್ಯಕ್ಷರಾಗಿ ಅಬ್ದುಲ್ ಅಜೀಂ ಅಧಿಕಾರ ಸ್ವೀಕರಿಸಿದರು. ಈ ಸಮಾರಂಭದಲ್ಲಿ ಮಾಜಿ ಡಿಸಿಎಂ ಆರ್. ಆಶೋಕ್ ಮತ್ತು ಮಾಜಿ ಎಮ್ಎಲ್ಸಿ ಡಿ.ಎಸ್ ವೀರಯ್ಯ ಉಪಸ್ಥಿತರಿದ್ದರು. ಕಾರ್ಯಕ್ರಮದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಮಾಜಿ ಡಿಸಿಎಂ ಆರ್ ಅಶೋಕ್, ಸಮಾಜದಲ್ಲಿ ಅಲ್ಪಸಂಖ್ಯಾತರನ್ನು ಮುಖ್ಯವಾಹಿನಿಗೆ ತರಬೇಕು. ಅವರ ಕುಂದು ಕೊರತೆಗಳನ್ನು ಅರಿತುಕೊಳ್ಳಬೇಕು. ಮುಂಬರುವ ಚುನಾವಣೆಯಲ್ಲಿ ಜಯಭೇರಿಯಾಗಬೇಕಾದರೆ ಎಲ್ಲ ಸಮುದಾಯದ ಬೆಂಬಲವು