ಬೆಂಗಳೂರು: ಇನ್ನು ಮೂರೇ ತಿಂಗಳಲ್ಲಿ ಈ ಮೈತ್ರಿ ಸರ್ಕಾರ ಪತನಗೊಂಡು ಬಿಎಸ್ ಯಡಿಯೂರಪ್ಪ ಹೊಸ ಸಿಎಂ ಆಗಲಿದ್ದಾರಂತೆ! ಹಾಗಂತ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಭವಿಷ್ಯ ನುಡಿದಿದ್ದಾರೆ.ತಮ್ಮದೇ ಬೆಂಬಲದೊಂದಿಗೆ ಮುಖ್ಯಮಂತ್ರಿಯಾದ ಕುಮಾರಸ್ವಾಮಿ ಮತ್ತು ಜೆಡಿಎಸ್ ವರಿಷ್ಠ ದೇವೇಗೌಡರು ಸಿದ್ದರಾಮಯ್ಯಗೇ ಅವಮಾನ ಮಾಡುತ್ತಿದ್ದಾರೆ. ಇದನ್ನು ನೋಡಿ ಸ್ವತಃ ಸಿದ್ದರಾಮಯ್ಯ ಅವರೇ ಈ ಸರ್ಕಾರವನ್ನು ಪತನಗೊಳಿಸಲಿದ್ದಾರೆ ಎಂದು ಯತ್ನಾಳ್ ಹೇಳಿಕೊಂಡಿದ್ದಾರೆ.ಇದಾದ ಬಳಿಕ ಬಿಎಸ್ ವೈ ನೇತೃತ್ವದಲ್ಲಿ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಸ್ಥಾಪನೆಯಾಗಲಿದೆ